6th December 2023
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ಹೆಚ್.ಎ.ಎಲ್ ಗೆ ನೀಡಿದ್ದ 610  ಎಕರೆ ಭೂಮಿ ವಿವಾದ ಹೈಕೋರ್ಟ್‌ನಲ್ಲಿರುವುದರಿಂದ ಗೋವಾದಲ್ಲಿ ಹೆಚ್.ಎ.ಎಲ್ ಘಟಕ ಸ್ಥಾಪಿಸಲು ಫಿಸಿಬಿಲಿಟಿ ರಿಪೋರ್ಟ್ ತಯಾರಿಸಲು 2015 ರಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್ ಸೂಚನೆ ಇಲಾಖಾ ಅಧಿಕಾರಿಗಳಲ್ಲಿ ತಲ್ಲಣ ಮೂಡಿಸಿತು. ಗುಬ್ಬಿ ಹೆಚ್.ಎ.ಎಲ್ ಘಟಕವನ್ನೇ ಗೋವಾಕ್ಕೆ ಶಿಪ್ಟ್ ಮಾಡುವುದು ಬಹತೇಕ ಖಚಿತ ಎಂಬ ನಿಲುವು ಎಲ್ಲರಲ್ಲೂ ಮನೆ ಮಾಡಿತ್ತು.

 ಕರ್ನಾಟಕ ರಾಜ್ಯ ಸರ್ಕಾರ ಸಮೋರಾಪಾದಿಯಲ್ಲಿ ಚುರುಕುಗೊಂಡಿತು. ಈ ಹಿನ್ನೆಲೆಯಲ್ಲಿ  ಶೀಘ್ರ ಶಂಕುಸ್ಥಾಪನೆ ಮಾಡಲು ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ಕಾರ್ಯದರ್ಶಿ ಶ್ರೀ ಜಿ.ಮೋಹನ್ ಕುಮಾರ್ ರವರಿಗೆ ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನಕಾರ್ಯದರ್ಶಿ ಶ್ರೀಮತಿ ಕೆ. ರತ್ನಪ್ರಭರವರು ಪತ್ರ ಬರೆದರು.

About The Author