9th October 2024
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ಹೆಚ್.ಎ.ಎಲ್ ಗೆ ನೀಡಿದ್ದ 610 ಎಕರೆ ಭೂಮಿ ವಿವಾದ ಹೈಕೋರ್ಟ್‌ನಲ್ಲಿರುವುದರಿಂದ ಗೋವಾದಲ್ಲಿ ಹೆಚ್.ಎ.ಎಲ್ ಘಟಕ ಸ್ಥಾಪಿಸಲು ಫಿಸಿಬಿಲಿಟಿ ರಿಪೋರ್ಟ್ ತಯಾರಿಸಲು 2015 ರಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್ ಸೂಚನೆ ಇಲಾಖಾ ಅಧಿಕಾರಿಗಳಲ್ಲಿ ತಲ್ಲಣ ಮೂಡಿಸಿತು. ಗುಬ್ಬಿ ಹೆಚ್.ಎ.ಎಲ್ ಘಟಕವನ್ನೇ ಗೋವಾಕ್ಕೆ ಶಿಪ್ಟ್ ಮಾಡುವುದು ಬಹತೇಕ ಖಚಿತ ಎಂಬ ನಿಲುವು ಎಲ್ಲರಲ್ಲೂ ಮನೆ ಮಾಡಿತ್ತು.

   ಈ ಹಿನ್ನೆಲೆಯಲ್ಲಿ ತುಮಕೂರಿನ ಅಭಿವೃದ್ಧಿ ರೆವೂಲ್ಯೂಷನ್ ಫೋರಂ ರಾಜ್ಯದ ಎಲ್ಲಾ ಸಂಸದರಿಗೆ ಬರೆದ ಪತ್ರಕ್ಕೆ ಸ್ಪಂದಿಸಿ, ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರು. ಮಾನ್ಯ ಲೋಕಸಭಾ ಸದಸ್ಯರಾದ ಶ್ರೀ ಪ್ರಹ್ಲಾದ ಜೋಷಿರವರು ಮಾನ್ಯ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್‌ರವರಿಗೆ ಬರೆದ ಪತ್ರ.