22nd December 2024
Share

TUMAKURU:SHAKTHI PEETA FOUNDATION

ಕರ್ನಾಟಕ ರಾಜ್ಯ ಮಟ್ಟದ ದಿಶಾ ಸಮಿತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಚುನಾಯಿತ ಜನಪ್ರನಿಧಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ವಿವಿಧ ಕ್ಷೇತ್ರದ ಪರಿಣಿತರ  ನಾಮನಿರ್ದೇಶಿತ ಸದಸ್ಯರು ಮತ್ತು ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥ ಅಧಿಕಾರಿಗಳು ಸದಸ್ಯರಾಗಿ ಇರುತ್ತಾರೆ.

 ಚುನಾಯಿತ ಜನಪ್ರನಿಧಿಗಳು, ಅಧಿಕಾರಿಗಳ ಜೊತೆಗೆ ನಾಮನಿರ್ದೇಶಿತ ಸದಸ್ಯರನ್ನು ಸೇರ್ಪಡೆ ಮಾಡುವ ಮೂಲಕ ಕೇಂದ್ರದ ಎಲ್ಲಾ ಇಲಾಖೆಗಳ ಅನುದಾನವನ್ನು, ಆಯಾ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಕಾಲಮಿತಿಯಲ್ಲಿ ಬಳಸಲಿ, ತಪ್ಪಾಗಿದ್ದಲ್ಲಿ ಸರಿಪಡಿಸಲಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೊಸ ಹೊಸ ಅನ್ವೇಷಣೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲಿ, ಎಂಬ ಸದುದ್ದೇಶದಿಂದ ದಿಶಾ ಸಮಿತಿಯನ್ನು ಮಾನ್ಯ ಪ್ರಧಾನ ಮಂತ್ರಿಯವರು ರಚಿಸಿದ್ದಾರೆ. 

 ರಾಜ್ಯ ಮಟ್ಟದ ದಿಶಾ ಸಮಿತಿಗೆ ರಾಜ್ಯದ ಮುಖ್ಯಮಂತ್ರಿಗಳನ್ನು ಅಧ್ಯಕ್ಷರಾಗಿ ನೇಮಕಮಾಡಿದ್ದರೆ, ಜಿಲ್ಲಾ ಮಟ್ಟದಲ್ಲಿ ಲೋಕಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ರಚಿಸಿದ್ದಾರೆ. ಇಲ್ಲಿಯೂ ಸಹ ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಚುನಾಯಿತ ಜನಪ್ರನಿಧಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ವಿವಿಧ ಕ್ಷೇತ್ರದ ಪರಿಣಿತರ  ನಾಮನಿರ್ದೇಶಿತ ಸದಸ್ಯರು, ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಮುಖ್ಯಸ್ಥ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಭುದ್ಧತೆ ಮೆರೆದಿದೆ.

 ಮಾನ್ಯ ಪ್ರಧಾನಿಯವರಾದ ಶ್ರೀ ಮೋದಿಯವರು ಹೇಳುವಂತೆ ನಿಜಕ್ಕೂ ಇದು ಟೀಂ- ಇಂಡಿಯಾ’ ಕ್ಕೆ ಪ್ರಥಮ ಮೆಟ್ಟಿಲಿನಂತಿದೆ. ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮಲತಾಯಿ ಧೋರಣೆ’ ಎಂಬ ಅಪವಾದವನ್ನು ಆಗಿದ್ದಾಂಗ್ಗೆ ಮಾಡುತ್ತಲೇ ಬಂದಿದ್ದಾರೆ. ಇದು ಯಾವ ಪಕ್ಷಕ್ಕೂ ಹೊರತಾಗಿಲ್ಲ ಎಂದರೆ ತಪ್ಪಾಗಲಾರದು. ಈ ಅಪವಾದದ ಸಮಗ್ರ ಪರಿಶೀಲನೆಯೂ ಅಗತ್ಯವಾಗಿದೆ.

  ಆದರೇ ತಾಜಾ ಅಂಕಿ ಅಂಶಗಳನ್ನು ಇಟ್ಟುಕೊಂಡು ಮಾತನಾಡುವ ಪದ್ಧತಿ ಕಡಿಮೆ ಇದೆ. ಇದೂವರೆಗೂ ಕೇಂದ್ರದಿಂದ ಪ್ರತಿ ವರ್ಷ ಬರುವ ಅನುದಾನದ ಮಾಹಿತಿ ಒಂದೇ ಕಡೆ ಎಲ್ಲೂ ಲಭ್ಯವಿಲ್ಲ, ನಾನು ಕಳೆದ ಹಲವಾರು ವರ್ಷಗಳಿಂದ ಈ ಬಗ್ಗೆ ಅಧ್ಯಯನ ಮಾಡುತ್ತಿದ್ದೇನೆ. ಪ್ರಸ್ತುತ ದಿಶಾ ಸಮಿತಿ ಮಾರ್ಗಸೂಚಿಯ ಪ್ರಕಾರ ಎಲ್ಲಾ ಮಾಹಿತಿಗಳು ಒಂದೇ ಕಡೆ ಲಭ್ಯವಾಗಲೇಬೇಕು. ಯಾವೊಂದು ಇಲಾಖೆಯಾಗಲಿ, ಸಂಘ ಸಂಸ್ಥೆಗಳಾಗಲಿ, ನಿಗಮ, ಮಂಡಳಿ, ಕಾರ್ಪೋರೇಷನ್‌ಗಳಾಗಲಿ ಹೊರತಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದು ರೂ ಅನುದಾನ ಬಂದರೂ ದಿಶಾ ಸಮಿತಿ ವ್ಯಾಪ್ತಿಗೆ ಬರಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಯಾವ ರೀತಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲು ರಾಜ್ಯ ಮಟ್ಟದ ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರ ಪ್ರಥಮ ಸಭೆ  ದಿನಾಂಕ:06.10.2020 ರಂದು ಬೆಂಗಳೂರಿನಲ್ಲಿ ನಡೆಯಲಿದೆ.