5th December 2022
Share

ಊರಿಗೊಂದು ಕೆರೆ- ಕೆರೆಗೆ ನದಿ ನೀರು’

ಮುಖ್ಯಮಂತ್ರಿಗಳ ಆದೇಶ ದಿನಾಂಕ: 09.11.2020  ಇಂದಿಗೆ 77 ದಿವಸ.

ರಾಜ್ಯ ನದಿ ಜೋಡಣೆ- ಬಹಿರಂಗ ಡೈರಿ ಭಾಗ-27 ದಿನಾಂಕ: 26.01.2021

 ಕೇಂದ್ರ ಸರ್ಕಾರದ ನದಿಜೋಡಣೆ, ರಾಜ್ಯದ ನದಿ ಜೋಡಣೆ ಮತ್ತು ಊರಿಗೊಂದು ಕೆರೆ- ಕೆರೆಗೆ ನದಿ ನೀರು’ ಯೋಜನೆ ಡಿಪಿಆರ್ ಮಾಡಲು ಅಗತ್ಯಕ್ರಮಕೈಗೊಳ್ಳಲು ಮಾನ್ಯ ಮುಖ್ಯ ಮಂತ್ರಿಯವರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ದಿನಾಂಕ:09.11.2020  ರಂದು ಆದೇಶ ನೀಡಿದ್ದರು. 

  ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳೆರವರು ಕಡತಕ್ಕೆ ಅನುಮೋದನೆ ನೀಡುವ ಮೂಲಕ  ಗಣರಾಜ್ಯೋತ್ಸವ (26.01.2021) ಸಂದರ್ಭದಲ್ಲಿ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಜಲ ಸಂಪನ್ಮೂಲ ಅಪರ ಮುಖ್ಯ ಕಾರ್ಯದರ್ಶಿಯವರಾದ ಶ್ರೀ ರಾಕೇಶ್‌ಸಿಂಗ್‌ರವರು ಮತ್ತು ಅವರ ತಂಡದ ಅಂಗಳದಲ್ಲಿ ಚೆಂಡು ಬಿದ್ದಿದೆ.

  ರಾಜ್ಯದ 224 ವಿಧಾನಸಭಾ ಕ್ಷೇತ್ರದ ಶಾಸಕರು ಸಹ ಪಕ್ಷಬೇಧ ಮರೆತು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ನದಿ ನೀರಿನಿಂದ ತುಂಬಿಸಲು ತಮ್ಮದೇ ಆದ ಪರಿಕಲ್ಪನೆಗಳನ್ನು ನೀಡುವುದು ಅಗತ್ಯವಾಗಿದೆ.

 ಸಣ್ಣ ನೀರಾವರಿ ಇಲಾಖೆ ಮತ್ತು ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಲೀಕತ್ವದಲ್ಲಿ ಇರುವ ಕೆರೆ-ಕಟ್ಟೆಗಳಿಗೆ ನದಿ ನೀರು ತುಂಬಿಸಲು ಆಯಾ ಇಲಾಖೆಗಳು ವಿಶೇಷ ಗಮನಹರಿಸುವುದು ಅಗತ್ಯವಾಗಿದೆ.