12th September 2024
Share

TUMAKURU:SHAKTHIPEETA FOUNDATION

ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯು ದಿನಾಂಕ:05.07.2021 ರಂದು ಮಾನ್ಯ ಮುಖ್ಯ ಮಂತ್ರಿಯವರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕೇಂದ್ರ ಸರ್ಕಾರ 2016 ರಲ್ಲಿ ರಾಜ್ಯ ಮಟ್ಟದ ದಿಶಾ ಸಮಿತಿ ರಚಿಸಿ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಅಂದಿನಿಂದ ಆಡಳಿತ ನಡೆಸಿದ ಮಾಜಿ ಮುಖ್ಯ ಮಂತ್ರಿಯವರಾದ ಶ್ರೀ ಸಿದ್ಧರಾಮಯ್ಯನವರಾಗಲಿ ಅಥವಾ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರಾಗಲಿ ದಿಶಾ ಸಮಿತಿ ರಚಿಸಿರಲಿಲ್ಲ.

ಈಗಿನ ಮುಖ್ಯ ಮಂತ್ರಿಯವರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ದಿಶಾ ಸಮಿತಿ ರಚಿಸಿ ಪ್ರಥಮ ಸಭೆಯನ್ನು ಎರಡು ಭಾರಿ ನಿಗದಿಗೊಳಿಸಿದ್ದರೂ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿತ್ತು. ಈಗ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ಚರ್ಚಿಸಬೇಕಾದ ಅಜೆಂಡಾಗಳ ಪಟ್ಟಿ ನೀಡಲು ಇಂದು ದಿನಾಂಕ:28.06.2021 ರಂದು ಮುಖ್ಯ ಮಂತ್ರಿಯವರಿಗೆ ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರು ಹಾಗೂ ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು ಮತ್ತು ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರಾದ ಕುಂದರನಹಳ್ಳಿ ರಮೇಶ್ ಮುಖ್ಯ ಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮನವಿ ಸಲ್ಲಿಸಿ, ಮುಖ್ಯ ಮಂತ್ರಿಯವರ ಕಾರ್ಯದರ್ಶಿಯಾದ ಶ್ರೀ ಸೆಲ್ವಕುಮಾರ್ ರವರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಐಐಹೆಚ್‍ಆರ್ ಅಧಿಕಾರಿಗಳ ತಂಡ ಇಲಾಖೆಯಿಂದ ಬೆಳೆದ ವಿವಿಧ ಜಾತಿಯ ಹಣ್ಣುಗಳು ಮತ್ತು ತುಮಕೂರು ಜಿಲ್ಲೆಯ ಸಿದ್ಧು ಹಲಸು ಗಿಡವನ್ನು ಮಾನ್ಯ ಮುಖ್ಯ ಮಂತ್ರಿಯವರಿಗೆ  ನೀಡಿದರು.