TUMAKURU:SHAKTHIPEETA FOUNDATION
ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರ ಗೃಹ ಕಚೇರಿಯಲ್ಲಿ ಇಂದು ಹಲವಾರು ಇಲಾಖೆಗಳ ವಿವಿಧ ಯೋಜನೆಗಳ ಬಗ್ಗೆ ಸರಣೆ ಸಭೆ ನಡೆಸಲಾಯಿತು.
ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್ ನಲ್ಲಿ ಸುಮಾರು 40 ಎಕರೆ ಪ್ರದೇಶದಲ್ಲಿ ಕ್ರೀಡಾ ಗ್ರಾಮ ನಿರ್ಮಾಣ ಮಾಡುವ ಹಿನ್ನಲೆಯಲ್ಲಿ ರಾಜ್ಯದ ಮತ್ತು ದೇಶದ ಬೆಸ್ಟ್ ಪ್ರಾಕ್ಟೀಸ್ ಯೋಜನೆಗಳ ಮಾಹಿತಿ ಮತ್ತು ಇಲ್ಲಿ ಯಾವ ಯೋಜನೆ ಕೈಗೊಳ್ಳಬಹುದು ಎಂಬ ಬಗ್ಗೆ ಪರಿಣಿತರ ಸಲಹೆಗಳೊಂದಿಗೆ ಪಿಪಿಟಿ ಸಿದ್ಧಪಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಊರಿಗೊಂದು ಕೆರೆ- ಆ ಕೆರೆಗೆ ನದಿ ನೀರು ಯೋಜನೆಗೆ ತುಮಕೂರು ಜಿಲ್ಲೆಯಲ್ಲಿ ಯಾವುದೇ ನದಿ ನೀರಿನ ಅಲೋಕೇಷನ್ ಇಲ್ಲದೆ ಇರುವ ಗ್ರಾಮಗಳ ಕೆರೆಗಳಿಗೆ ಡಿಮ್ಯಾಂಡ್ ಸರ್ವೇ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮೆಗಾ ಇಂಡಸ್ಟ್ರಿಯಲ್ ಟೆಕ್ಸ್ ಟೈಲ್ ಪಾರ್ಕ್ ಆರಂಭವಾಗುವ ಪರಿಕಲ್ಪನೆಯಡಿ ಸೆಂಟರ್ ಆಫ್ ಎಕ್ಸ್ ಲೆನ್ಸ್ ಆರಂಭಿಸುವ ಬಗ್ಗೆ ಅಧಿಕಾರಿಗಳು ಮತ್ತು ಪರಿಣಿತರೊಂದಿಗೆ ಸಮಾಲೋಚನೆ ನಡೆಸಿ ಪಿಪಿಟಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಏರ್ ಪೋರ್ಟ್‍ಗೆ ಹೆಚ್ಚಿಗೆ ಸರ್ಕಾರಿ ಜಮೀನು ಲಭ್ಯವಿರುವ ಕಡೆ ಯೋಜನೆ ರೂಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.