23rd December 2024
Share

TUMAKURU:SHAKTHIPEETA FOUNDATION

ದೆಹಲಿಯಲ್ಲಿ ಜಲಶಕ್ತಿ ಸಚಿವಾಲಯದ ಅಧಿಕಾರಿಗಳಾದ ಶ್ರೀ ಸುಭೋದ್ ಯಾದವ್ ರವರೊಂದಿಗೆ ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು, ರಾಜ್ಯದ ನದಿ ಜೋಡಣೆ, ಊರಿಗೊಂದು ಕೆರೆ- ಆ ಕೆರೆಗೆ ನದಿ ನೀರು ಯೋಜನೆ ಮತ್ತು ತುಮಕೂರು ಜಿಲ್ಲಾ ಸಮಗ್ರ ನೀರಾವರಿ ಪ್ರಸ್ತಾವನೆಯೊಂದಿಗೆ ಸಮಾಲೋಚನೆ ನಡೆಸಿದರು.

ದಿನಾಂಕ:29.07.2019 ರಂದು ಶ್ರೀ ಜಿ.ಎಸ್.ಬಸವರಾಜ್ ರವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ರವರಿಗೆ ಪತ್ರ ಬರೆದಿದ್ದರು, ಈ ಪತ್ರದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ದಿನಾಂಕ:16.10.2019 ರಂದೇ ಪತ್ರ ಬರೆದು ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿದ್ದಾರೆ.

ಈ ವರೆಗೂ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಯಾವುದೇ ಉತ್ತರ ಹೋಗಿಲ್ಲ, ಸಂಸದರ ಮನವಿ ಮೇರೆಗೆ ಯಾವುದೇ ಯೋಜನೆ ಮಂಜೂರು ಮಾಡಲು ಸಾಧ್ಯವಿಲ್ಲ, ಸಂಸದರ ಮನವಿ ಮೇರೆಗೆ, ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವಾಲಯದ ಅಪರ ಮುಖ್ಯ ಕಾರ್ಯದರ್ಶಿಯವರ ಮೂಲಕ, ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿಯವರಿಗೆ ಪ್ರಸ್ತಾವನೆ ಸಲ್ಲಿಸುವುದು ನಿಯಮ.

ಸಂಸದರು 100 ಪತ್ರ ಬರೆದರೂ, ಮುಖ್ಯ ಮಂತ್ರಿಯವರು 1000 ಪತ್ರ ಬರೆದರೂ, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಹೋಗದಿದ್ದರೆ ಯಾವುದೇ ಪ್ರಯೋಜನವಿಲ್ಲ. ಇವರೊಂದಿಗೆ ಸಮಾಲೋಚನೆ ಮಾಡಿದಾಗ ನನ್ನ ಅನುಭವಕ್ಕೆ ಬಂದ ವಿಚಾರ ಇದು.