3rd March 2026
Share

TUMAKURU:SHAKTHIPEETA FOUNDATION

  ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಥವಾ ಪಿಪಿಪಿ ಯೋಜನೆಯಡಿ ಅಥವಾ  ಖಾಸಗಿಯಾಗಿ ವಿಶ್ವದಲ್ಲಿ ಇರುವ ಎಲ್ಲಾ ವಿಧವಾದ ಫಿಸಿಕಲ್ ಲೈಬ್ರರಿ, ಡಿಜಿಟಲ್ ಲೈಬ್ರರಿ ಮತ್ತು ಹ್ಯೂಮನ್ ಲೈಬ್ರರಿಗಳಿಗಿಂತ ವಿಭಿನ್ನವಾಗಿ ವಿಶ್ವದ ಗಮನ ಸೆಳೆಯುವಂಥ ಗ್ರಂಥಾಲಯವನ್ನಾಗಿ ತುಮಕೂರು ನಗರ ಗ್ರಂಥಾಲಯವನ್ನಾಗಿ ಮಾಡಲು ತುಮಕೂರು ಸ್ಮಾರ್ಟ್ ಸಿಟಿ ಅಡ್ವೈಸರಿ ಫೋರಂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ನಿರುದ್ಯೋಗಿಗಳಿಗೆ ಅನೂಕೂಲವಾಗುವಂತಹ ಯೋಜನೆಗಳನ್ನು ರೂಪಿಸಲು ನಗರದ ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್‍ರವರು ಮತ್ತು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು ಸಲಹೆ ನೀಡಿದ್ದಾರೆ.

ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಒಂದು ವರದಿ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಿಗೂ ಇನ್ ಕ್ಯುಬೇಷನ್ ಸೆಂಟರ್ ಬಗ್ಗೆ ವರದಿ ನೀಡಲು ಸೂಚಿಸಿದ್ದಾರೆ. ಅವರು ಈಗಾಗಲೇ ಒಂದು ಸಭೆ ನಡೆಸಿದ್ದಾರೆ.

ಈ ಹಿನ್ನಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಪ್ರಭಾವತಿ ಸುಧೀಶ್ವರ್ ರವರ ಅಧ್ಯಕ್ಷತೆಯಲ್ಲಿ ಇರುವ  ನಗರ ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ, ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿ  ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವ ಮಹತ್ವದ ಸಭೆ ನಡೆಯಲಿದೆ.

ಆಸಕ್ತರು ಸಲಹೆ ನೀಡಲು ಮನವಿ.