TUMAKURU:SHAKTHIPEETA FOUNDATION
ರಾಜ್ಯ ಸರ್ಕಾರ ನದಿ ಜೋಡಣೆ ವಿಚಾರದಲ್ಲಿ ಪಾದರಸದಂತೆ ಕಾರ್ಯ ನಿರ್ವಹಿಸಲು ಆರಂಭಿಸಿದೆ ಎಂದರೆ ತಪ್ಪಾಗಲಾರದು. ಕೆಳಕಂಡ ನಾಲ್ಕು ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದೆ.
ಈ ಎಲ್ಲಾ ಯೋಜನೆಗಳ ಬಗ್ಗೆ ದಿನಾಂಕ:11.02.2021 ರಂದು ದೆಹಲಿಯಲ್ಲಿ ತುಮಕೂರು ಲೋಕಸಭಾ ಸದಸ್ಯ sಶ್ರೀ ಜಿ.ಎಸ್.ಬಸವರಾಜ್ ರವರ ನೇತೃತ್ವದಲ್ಲಿ CENTRAL WATER COMMISSION CHAIRMAN SRI S.K.HALDAR ರವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಯಿತು. ಅವರು ಶೀಘ್ರವಾಗಿ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.
- ಭಧ್ರಾ ಮೇಲ್ದಂಡೆ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ
- ಎತ್ತಿನಹೊಳೆ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ
- ಭೇಡ್ತಿ ಮತ್ತು ವರದಾ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ
- ಊರಿಗೊಂದು ಕೆರೆ- ಆ ಕೆರೆಗೆ ನದಿ ನೀರು ಯೋಜನೆ ಜಾರಿ ಬಗ್ಗೆ